11:56 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ಇನ್ನಿಲ್ಲ

November 6, 2020, 12:55 PM

ಮಂಗಳೂರು(reporterkarnataka news):

ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ(51) ಶುಕ್ರವಾರ ಬೆಳಗ್ಗೆ ನಿಧನರಾದರು.

ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಎರಡು ತಿಂಗಳಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆಯಷ್ಟೇ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.

ಪೂವಳ ಅವರು ಮುಂಗಾರು ಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ತನ್ನ ವೃತ್ತಿ ಆರಂಭಿಸಿದ್ದರು. ನಂತರ ಅವರು ಕೆನರಾ ಟೈಮ್ಸ್ ಬಳಗದ ಕನ್ನಡ ಜನ ಅಂತರಂಗ ಹಾಗೂ ಕರಾವಳಿ ಅಲೆ ಪತ್ರಿಕೆಯ ವರದಿಗಾರನಾಗಿ ಕೆಲಸ ಮಾಡಿದ್ದರು.

ಸೌಮ್ಯ ಸ್ವಭಾವದ ಪೂವಳ ಅವರು ತನ್ನ ಸಜ್ಜನಿಕೆಗೆ ಪತ್ರಿಕಾ ರಂಗದಲ್ಲಿ ಪ್ರಸಿದ್ದರಾಗಿದ್ದರು. ಅವರು ಪತ್ನಿ ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು