ಇತ್ತೀಚಿನ ಸುದ್ದಿ
ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ: ಹಲವು ದಿನಗಳಿಂದ ತೈಲ ಬೆಲೆ ಏರುತ್ತಿದೆ
December 7, 2020, 9:47 AM

ನವದೆಹಲಿ(reporterkarnataka news): ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳವಾಗಿದೆ. ಪೆಟ್ರೋಲ್ ಪ್ರತಿ ಲೀಟರ್ ಗೆ 30 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 27 ಪೈಸೆ ಹೆಚ್ಚಳ ಮಾಡಲಾಗಿದೆ.
ಇದರ ಜತೆಗೆ ಸ್ಥಳೀಯ ತೆರಿಗೆಗಳು ಪ್ರತ್ಯೇಕ.
ಕಳೆದ ಹಲವು ದಿನಗಳಿಂದ ಸತತವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳವಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಹೆಚ್ಚಳವಾಗಿದೆ. ಇದರಿಂದ ದರ ಹೆಚ್ಚಳ ಅನಿವಾರ್ಯ ಎಂದು ತೈಲ ಸಂಸ್ಥೆಗಳು ಹೇಳುತ್ತಿವೆ.