ಇತ್ತೀಚಿನ ಸುದ್ದಿ
ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ
December 3, 2020, 11:32 AM

ತಿರುವನಂತಪುರಂ(reporterkarnataka news): ಪೋಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಸಲಾಂ ಮತ್ತು ಪಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತಿರುವನಂತಪುರಂ ಮತ್ತು ಮಲಪುರಂನಲ್ಲಿರುವ ಮನೆಗಳಲ್ಲಿ ಇದೀಗ ಶೋಧ ಕಾರ್ಯ ಮುಂದುವರಿದೆ. ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.