10:08 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ನ.23ರಂದು ಪಿಲಿಕುಳ ನಿಸರ್ಗಧಾಮ ಕಾಮಗಾರಿಗಳ ಶಂಕುಸ್ಥಾಪನೆ

November 21, 2020, 8:32 PM

ಮಂಗಳೂರು(reporterkarnataka news): ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾಯೋಜನೆಯಲ್ಲಿ ಅನುಮೋದನೆಗೊಂಡ ಪಿಲಿಕುಳ ನಿಸರ್ಗಧಾಮದ ಬಳಿಯ ಕಾಮಗಾರಿಗಳಿಗೆ ನವೆಂಬರ್ 23 ರಂದು ಬೆಳಗ್ಗೆ 11.30ಕ್ಕೆ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ  ಶಂಕುಸ್ಥಾಪನೆ ನಡೆಯಲಿದೆ.
    ಮೂಡುಶೆಡ್ಡೆ ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಹೊರಾಂಗಣ ರಸ್ತೆ ಡಾಮರೀಕರಣ ಕಾಮಗಾರಿ ಮತ್ತು ಪಿಲಿಕುಳ ದ್ವಾರದವರೆಗೆ ನಾಲ್ಕು ಪಥದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳ ಶಂಕುಸ್ಥಾಪನೆ ನಡೆಯಲಿದ್ದು, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಎ ಕೋಟ್ಯಾನ್ ಅಧ್ಯಕ್ಷತ ವಹಿಸಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಭಾಗವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ  ಸಂಸದ ನಳಿನ್ ಕುಮಾರ್ ಕಟೀಲು, ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಬಿ.ಎಂ ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್.ಭೋಜೇಗೌಡ, ಪ್ರತಾಪಸಿಂಹ ನಾಯಕ್ ಕೆ, ಮಂಗಳೂರು ಮಹಾನಗರಪಾಲಿಕೆಯ ಮಹಾಪೌರ ದಿವಾಕರ್ ಪಾಂಡೇಶ್ವರ್, ತಾಲೂಕು ಪಂಚಾಯತ್ ಅಧ್ಯಕ್ಷ ಮಹ್ಮಮದ್ ಮೋನು, ಮತ್ತಿತರ ಅತಿಥಿಗಳು ಉಪಸ್ಥಿತರಿರುವರು. 

ಇತ್ತೀಚಿನ ಸುದ್ದಿ

ಜಾಹೀರಾತು