ಇತ್ತೀಚಿನ ಸುದ್ದಿ
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಇಂದು ಸಾರ್ವಜನಿಕರ ವೀಕ್ಷಣೆಗೆ ಲಭ್ಯ
December 25, 2020, 8:53 AM

ಮಂಗಳೂರು (reporterkarnataka): ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಡಿಸೆಂಬರ್ 25 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ.
ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ ಮತ್ತು ಸ್ಯಾನಿಟೈಸರನ್ನು ಕಡ್ಡಾಯವಾಗಿ ಬಳಸಿ ವೀಕ್ಷಿಸಬಹುದಾಗಿದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.