12:30 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಪೊಲೀಸರ ಸಾಥ್ ನಲ್ಲೇ ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ: 800 ಗ್ರಾಂ ಸ್ವರ್ಣಾಭರಣ ದರೋಡೆ? 

November 22, 2020, 9:12 AM

ಬೆಂಗಳೂರು(reporterkarnataka news): ಪೊಲೀಸ್ ಸಿಬ್ಬಂದಿಯೇ ಕಳ್ಳರ ಜತೆ ಸೇರಿ ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ ನಡೆಸಿದ ಪ್ರಕರಣ ಬೆಂಗಳೂರಿನಲ್ಲಿ  ವರದಿಯಾಗಿದೆ.

ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಈ ಪ್ರಕರಣ ಬೆಳಕಿಗೆ ಬಂದಿದೆ. ನವೆಂಬರ್ 11 ರಂದು ಈ ಘಟನೆ ನಡೆದಿತ್ತು.  ಎಂಟು ಮಂದಿಯ ತಂಡ  ಚಿನ್ನಾಭರಣದ ಅಂಗಡಿ ಮೇಲೆ ದಾಳಿ ನಡೆಸಿತ್ತು. ಕಾರ್ತಿಕ್ ಈ ಅಂಗಡಿ ಮಾಲಿಕರಾಗಿದ್ದರು. ಯಾವುದೇ ಪರವಾನಿಗೆ  ಪಡೆಯದೆ  ಕಾರ್ತಿಕ್ ವ್ಯವಹಾರ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಗಳು ಕಾಡುಗೋಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಅಶೋಕ್ ಮತ್ತು ಚೌಡೇಗೌಡ ನೆರವು ಪಡೆದು ನಕಲಿ  ದಾಳಿಯಲ್ಲಿ ಶಾಮೀಲಾಗಿದ್ದರು ಎಂದು ಆರೋಪಿಸಲಾಗಿದೆ.  . 800 ಗ್ರಾಮ್ ಚಿನ್ನಾಭರಣ ದರೋಡೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು