11:09 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಪೂರ್ಣಾವಧಿ ವಾರ್ತಾಧಿಕಾರಿ ಶೀಘ್ರ ನೇಮಿಸುವಂತೆ ದ.ಕ. ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹ

November 23, 2020, 8:19 AM


ಮಂಗಳೂರು(reporterkarnataka news):
ದ.ಕ. ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಪೂರ್ಣಾವಧಿಯ ವಾರ್ತಾಧಿಕಾರಿಯನ್ನು ಶೀಘ್ರವೇ ನೇಮಿಸುವಂತೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಗ್ರಹಿಸಿದೆ.

ಇಲಾಖೆಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಎ.ಖಾದರ್ ಶಾ ಅವರನ್ನು ವರ್ಗಾಯಿಸಲಾಗಿದೆ. ಉಡುಪಿ ಜಿಲ್ಲಾ ವಾರ್ತಾಧಿಕಾರಿಗೆ ಪ್ರಭಾರ ನೀಡಲಾಗಿದೆ. ಇದರಿಂದಾಗಿ ವಿವಿಧ ಇಲಾಖೆಗಳೊಂದಿಗೆ ಪತ್ರಕರ್ತರ ಸಮನ್ವಯತೆಗೆ ಅಡಚಣೆ ಉಂಟಾಗಿದೆ. ಇಲ್ಲಿ ಪೂರ್ಣಾವಧಿ ವಾರ್ತಾಧಿಕಾರಿ ಇಲ್ಲದಿರುವ ಹಿನ್ನೆಲೆಯಲ್ಲಿ ಸರಕಾರದ ಆಯುಷ್ಮಾನ್ ಆರೋಗ್ಯ

ಕಾರ್ಡ್ ವಿತರಣೆಯಾಗುತ್ತಿಲ್ಲ. ಅದಲ್ಲದೆ ವಾರ್ತಾಧಿಕಾರಿ ಇಲ್ಲದ ಕಾರಣದಿಂದ ಪತ್ರಕರ್ತ ರಿಗೆ ಸಮಸ್ಯೆ ಉಂಟಾಗಿದೆ. ಆದುದರಿಂದ ತಕ್ಷಣ ಪೂರ್ಣಾವಧಿ ವಾರ್ತಾಧಿಕಾರಿಯನ್ನು ನೇಮಿಸುವಂತೆ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು