9:03 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಕೊರೊನಾ ಕರಾಮತ್ತು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೆಗೆಟಿವ್ ಎಂದ ಸಂಸದ ತಿವಾರಿ ಟ್ವೀಟ್ ಡಿಲಿಟ್

August 9, 2020, 9:29 AM

ಮಂಗಳೂರು(reporterkarnataka news):

ಕೊರೊನಾ ಪಾಸಿಟಿವ್, ನೆಗೆಟಿವ್ ಎಂದು ಹೇಳಿಕೊಳ್ಳುವಲ್ಲಿಯೂ ರಾಜಕಾರಣಿಗಳು, ಅಧಿಕಾರಸ್ಥರು ನಾಟಕ ಶುರು ಮಾಡಿದ್ದಾರೇನೊ ಎನ್ನುವ ಗುಮಾನಿ ಜನಸಾಮಾನ್ಯರಲ್ಲಿ ಇರುವಾಗಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ನೆಗೆಟಿವ್ ಬಂದಿರುವುದಾಗಿ ಬಿಜೆಪಿ ಸಂಸದರೊಬ್ಬರು ಟ್ವೀಟ್ ಮಾಡಿ ಮತ್ತೆ ಡಿಲೀಟ್ ಮಾಡಿದ್ದಾರೆ.

ವಾರದ ಹಿಂದೆ ಅಮಿತ್ ಶಾ ಅವರಿಗೆ ಕೊರೊನಾ ಪಾಸಿಟಿವ್ ಎಂದು ಘೋಷಿಸಲಾಯಿತು. ನಂತರ ಶುಕ್ರವಾರ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ಬಂತು ಎನ್ನಲಾಯಿತು. ಈ ಮಧ್ಯೆ ಬಿಜೆಪಿ ಸಂಸದ ಮನೋಜ್ ತಿವಾರಿ ಅವರು ಅಮಿತ್ ಶಾ ಅವರಿಗೆ ನೆಗೆಟಿವ್ ಬಂದಿರುವುದಾಗಿ ಟ್ವೀಟ್ ಮಾಡಿದ್ದರು. ಇದೀಗ ಆ ಟ್ವೀಟನ್ನು ಡಿಲಿಟ್ ಮಾಡಿದ್ದಾರೆ.

ವಾರದ ಹಿಂದೆ ಅಮಿತ್ ಶಾ ಅವರಿಗೆ ಕೋವಿಡ್-19 ರೋಗ ದೃಢಪಟ್ಟಿದ್ದು ಹರ್ಯಾಣದ ಗುರು ಗ್ರಾಮದಲ್ಲಿರುವ ಮೆದಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಮಿತ್ ಶಾ ಅವರಿಗೆ ಕೋವಿಡ್ ಇಲ್ಲ ಎಂಬುದು ಸುದ್ದಿಯಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಗೃಹ ಸಚಿವಾಲಯ ಶಾ ಅವರಿಗೆ ಈವರೆಗೆ ಕೋವಿಡ್ ಪರೀಕ್ಷೆ ನಡೆಸಿಲ್ಲ ಎಂದು ಟ್ವೀಟಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು