9:59 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಪವರ್ ಟಿವಿ ಬಂದ್ ಮಾಡಿರುವುದು ಆಡಳಿತ ವರ್ಗದ ಅಸಹಾಯಕತೆಯ ?, ಜನರಿಂದ, ಪತ್ರಕರ್ತ ಸಂಘದಿಂದ ಬೆಂಬಲದ ಧ್ವನಿ

September 30, 2020, 12:41 AM

ಬೆಂಗಳೂರು (Reporter Karnataka News)

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದರ ಬಗ್ಗೆ ನಿರೂಪಕ ರೆಹಮಾನ್ ಹಾಸನ್ ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟಿದ್ದಾರೆ.

ಪವರ್ ಟಿವಿ ಮೇಲೆ ಸಿಸಿಬಿ ಪೊಲೀಸರು ರೇಡ್ ಮಾಡಿದ್ದಾರೆ. ಅವರಿಗೆ ಬೇಕಾದ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ. ಚಾನೆಲ್ ಬಂದ್ ಮಾಡಿದ್ದು ನಮ್ಮ ಫೇಸ್ ಬುಕ್ ಲೈವನ್ನು ಬಂದ್ ಮಾಡಿದ್ದಾರೆ. ಇದರಿಂದ 250ಕ್ಕೂ ಉದ್ಯೋಗಿಗಳ ಕುಟುಂಬ ಬೀದಿಗೆ ಬಂದಿವೆ ಎಂದು ಹೇಳಿದ್ದಾರೆ.

ಪವರ್ ಟಿವಿ ಮೂಲಕ ಸತ್ಯಕ್ಕಾಗಿ ನಾವು ಧ್ವನಿಯೆತ್ತಿದ್ದೇವೆ. ವಿಜಯೇಂದ್ರ ವಿರುದ್ಧ ಧ್ವನಿಯೆತ್ತುವುದನ್ನು ನಿಲ್ಲಿಸುವುದಿಲ್ಲ.

ಇನ್ನು ಪವರ್ ಟಿವಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮುಖ್ಯಮಂತ್ರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಇದೇ ಟಿವಿ ಮಾಲೀಕರ ಮೇಲೆ ಆರೋಪ ಬೇರೆ ವಿಚಾರ. ಈ ಬಗ್ಗೆ ತನಿಖೆ ನಡೆಸುವುದಕ್ಕೆ ಅಭ್ಯಂತರವಿಲ್ಲ. ಆದರೆ, ಒಂದು ಟಿವಿ ವಾಹಿನಿ ಲೈವ್ ಬಂದ್ ಮಾಡುವುರಿಂದ ಅದನ್ನು ಅವಲಂಬಿಸಿ ವೃತ್ತಿ ಮಾಡುತ್ತಿರುವ ನೂರಾರು ಪತ್ರಕರ್ತರ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ತಾವು ಈ ಕೂಡಲೇ ಗೃಹ ಸಚಿವರಿಗೆ ನಿರ್ದೇಶನ ನೀಡಿ, ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ, ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಶಿವಾನಂದ ತಗಡೂರು ಪತ್ರದಲ್ಲಿ ತಿಳಿಸಿದ್ದಾರೆ.

ಅದೇ ರೀತಿ ಸಾರ್ವಜನಿಕ ವಲಯದಿಂದಲೂ ಪವರ್ ಟಿವಿಗೆ ಪರವಾಗಿ ಬೆಂಬಲದ ಧ್ವನಿ ಕೇಳಿ ಬರುತ್ತಿದೆ. ಕಾನೂನಾತ್ಮಕ ದಾರಿಯನ್ನು ಬಿಟ್ಟು ಈ ರೀತಿ ಚಾನೆಲ್ ಬಂದ್ ಮಾಡುವುದು ವ್ಯವಸ್ಥೆಯ ಅಸಹಾಯಕತೆ ಎಂದೂ ಹಲವು ಮಂದಿ ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು