ಇತ್ತೀಚಿನ ಸುದ್ದಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಸೇವಾ ಸಪ್ತಾಹ ನಡೆಸಲು ಬಿಜೆಪಿ ನಿರ್ಧಾರ
August 30, 2020, 5:15 AM

ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಹುಟ್ಟು ಹಬ್ಬವನ್ನು ಸೇವಾ ಸಪ್ತಾಹವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ.
ಸೇವೆಯ ಮೂಲಕ ರಾಷ್ಟ್ರಕ್ಕೆ ಅರ್ಪಣೆ ಎಂಬ ಚಿಂತನೆಯನ್ನು ಸಾಕಾರಗೊಳಿಸಲು ಉದ್ದೇಶಿಸಲಾಗಿದೆ. ಸೆಪ್ಟೆಂಬರ್ 14ರಿಂದ ಒಂದು ವಾರ ಇದು ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಷ್ಟ್ರಮಟ್ಟದಲ್ಲಿ ಈ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.