11:37 PM Sunday24 - January 2021
ಬ್ರೇಕಿಂಗ್ ನ್ಯೂಸ್
ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ?  ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ…

ಇತ್ತೀಚಿನ ಸುದ್ದಿ

ಪ್ರಜ್ಞೆ ತಪ್ಪಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಸದಾನಂದ ಗೌಡರ ಆರೋಗ್ಯ ವಿಚಾರಿಸಿದ ಸಿಎಂ

January 4, 2021, 5:49 PM

ಬೆಂಗಳೂರು(reporterkarnataka news): ಲೋ ಶುಗರ್ ನಿಂದ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಸದಾನಂದ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಸಮಿತಿಯ ವಿಶೇಷ ಸಭೆಯಲ್ಲಿ ಭಾಗವಹಿಸಿದ ಬಳಿಕ ಚಿತ್ರದುರ್ಗಕ್ಕೆ ತೆರಳಿದ ಸದಾನಂದ ಗೌಡ ಅವರು ಕಾರಿನಲ್ಲೇ ಪ್ರಜ್ಞೆ ತಪ್ಪಿ ಬಿದ್ದು ಬಿಟ್ಟಿದ್ದರು. ಚಿತ್ರದುರ್ಗದ ಹೋಟೆಲ್ ಎದುರು ಕಾರು ನಿಲ್ಲಿಸಿ ಇನ್ನೇನು ಇಳಿಯ ಬೇಕೆನ್ನುವಷ್ಟರಲ್ಲಿ ಸಚಿವರು ಪ್ರಜ್ಞಾಹೀನರಾಗಿದ್ದರು. ನಂತರ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಸಚಿವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಮಂದಿ ಸಚಿವರು, ಶಾಸಕರು ಸದಾನಂದ ಗೌಡ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು