ಇತ್ತೀಚಿನ ಸುದ್ದಿ
ಪ್ರಶಾಂತ್ ಭೂಷಣ್ ಗೆ ಒಂದು ರೂಪಾಯಿ ದಂಡ, ತಪ್ಪಿದರೆ 3 ತಿಂಗಳು ಸಜೆ
August 31, 2020, 9:09 AM

ನವದೆಹಲಿ( reporterkarnataka news): ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಒಂದು ರೂಪಾಯಿ ದಂಡ ವಿಧಿಸಲಾಗಿದೆ. ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಸೆಪ್ಟೆಂಬರ್ 15ರೊಳಗೆ ದಂಡ ಪಾವತಿಸುವಂತೆ ಸುಪ್ರೀಂ ಆದೇಶ ನೀಡಿದೆ.
ದಂಡ ಪಾವತಿಸಲು ವಿಫಲರಾದರೆ ಮೂರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಮೂರು ವರ್ಷಗಳ ಕಾಲ ವಕೀಲ ವೃತ್ತಿ ಮೇಲೆ ನಿರ್ಬಂಧ ಜಾರಿಯಾಗಲಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ