ಇತ್ತೀಚಿನ ಸುದ್ದಿ
ಪುತ್ತೂರು: ಆತ್ಮ ನಿರ್ಭರ್ ಯೋಜನೆಯಡಿ ಸ್ವ ಉದ್ಯೋಗ ಮಾಹಿತಿ ಶಿಬಿರ
September 14, 2020, 4:07 AM

ಪುತ್ತೂರು(reporter karnataka News) ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ಕೇಂದ್ರ ಸರಕಾರದ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ಸ್ವ ಉದ್ಯೋಗ ಮಾಹಿತಿ ಹಾಗೂ ಸಾಲ ಸೌಲಭ್ಯಗಳ ಮಾಹಿತಿ ಶಿಬಿರವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾದ ಮುಕುಂದ ಬಜತ್ತೂರು, ಸುಜಾತ ಕೃಷ್ಣ, ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾ ಗ್ರಾಮಾಂತರ ಮಂಡಲ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಯಶೋಧಾ, ಉಷಾ ಮುಳಿಯ, ಬಿಜೆಪಿ ಪ್ರಮುಖರಾದ ಸುರೇಶ್ ಅತ್ರಮಜಲು, ಸುನಿಲ್ ದಡ್ಡು, ಬಿಜೆಪಿ ಕಾರ್ಯಕರ್ತರು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.