11:06 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಪುತ್ತೂರಿನಲ್ಲಿ ನಡೆಯಿತು ಎಬಿವಿಪಿ  ಮಂಗಳೂರು ವಿಭಾಗ ಅಭ್ಯಾಸ ವರ್ಗ

December 19, 2020, 9:08 PM

ಪುತ್ತೂರು(reporterkarnataka news):
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಅಭ್ಯಾಸ ವರ್ಗ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಉದ್ಘಾಟನಾ ಕಾರ್ಯಕ್ರಮವನ್ನು ಮೈತ್ರೇಯಿ ಗುರುಕುಲದ ಆಡಳಿತ ಮಂಡಳಿಯ ಅಧ್ಯಕ್ಷ ಎಸ್ . ಆರ್. ರಂಗಮೂರ್ತಿ ನೆರವೇರಿಸಿ “ರಾಷ್ಟ್ರ ಪುನರ್ ನಿರ್ಮಾಣದ ಕಾರ್ಯ ಎಬಿವಿಪಿಯಿಂದ  ಮಾತ್ರ ಸಾಧ್ಯ. ವಿದ್ಯಾರ್ಥಿ ಸಮಸ್ಯೆಗಳಿಗೆ ಸ್ಪಂದಿಸುತ್ತ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಗೊಳ್ಳುತ ಇತರ ವಿದ್ಯಾರ್ಥಿ ಸಂಘಟನೇಗಳಿಗೆ  ಮಾದರಿ ವಿದ್ಯಾರ್ಥಿ ಪರಿಷತ್. ವಿದ್ಯಾರ್ಥಿ ಸಮುದಾಯದಲ್ಲಿ ವಿವೇಕಾನಂದರ ತತ್ವ, ಆದರ್ಶ, ರಾಷ್ಟ್ರೀಯತೆಯನ್ನು ಪಸರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಿಯ ಚಿಂತನೆಯನ್ನು ಬೆಳೆಸುತ್ತಿದೆ” ಎಂದರು.

ಪುತ್ತೂರು ನಗರ ಅಧ್ಯಕ್ಷ ಸುಬ್ರಮಣ್ಯ, ಪ್ರಾಂತ ಕಾರ್ಯ ಸಮಿತಿ ಸದಸ್ಯರಾದ ಡಾ. ರವಿ ಎಂ.ಎನ್  ಹಾಗೂ ಮಂಗಳೂರು ವಿಭಾಗ  ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್  ಕೋರಿ ಉಪಸ್ಥಿತರಿದ್ದರು. 

ಎಬಿವಿಪಿ ಯ ಸೈದ್ಧಾಂತಿಕ ಭೂಮಿಕೆ, ಕಾರ್ಯಪದ್ದತಿ ,  ಕ್ಯಾಂಪಸ್ ಕಾರ್ಯ , ಪ್ರಶಿಕ್ಷಣ ಮುಂತಾದ ಅವಧಿಗಳು ನಡೆಯಲಿದ್ದು ವಿದ್ಯಾರ್ಥಿ ಪರಿಷತ್ತಿನ ಪ್ರಾಂತ ಸ್ಥರ ದ ಪ್ರಮುಖರು ಮಾರ್ಗದರ್ಶನ ಮಾಡಲಿದ್ದಾರೆ. ಶನಿವಾರದಂದು ಸಂಜೆ 7:00 ಗಂಟೆಗೆ  ‘ಶ್ರೀರಾಮ : ಸಾಮಾಜಿಕ ಮೌಲ್ಯ’ ಎಂಬ ವಿಷಯದ ಬಗ್ಗೆ ಎಬಿವಿಪಿ ಮಂಗಳೂರು ವಿಭಾಗ ಪ್ರಮುಖರಾದ ಕೇಶವ ಬಂಗೇರ ಇವರು ವಿಶೇಷ ಭಾಷಣ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು