ಇತ್ತೀಚಿನ ಸುದ್ದಿ
ಆರ್. ಆರ್. ನಗರ, ಶಿರಾ ಉಪ ಚುನಾವಣಾ ಕದನ : ಮುಗಿಲು ಮುಟ್ಟಿದ ಪ್ರಚಾರ
October 31, 2020, 8:53 AM

ಬೆಂಗಳೂರು(reporterkarnataka news): ವಿಧಾನಸಭಾ ಚುನಾವಣೆ ನಡೆಯುತ್ತಿರುವ ಆರ್. ಆರ್. ನಗರ ಮತ್ತು ಶಿರಾದಲ್ಲಿ ಪ್ರಚಾರ ಮುಗಿಲು ಮುಟ್ಟಿದೆ. ಇಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆರ್. ಆರ್. ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ನಡೆಸಲಿದ್ದಾರೆ. ಜಾಲಹಳ್ಳಿ, ಲಗ್ಗೆರೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಯಡಿಯೂರಪ್ಪ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶುಕ್ರವಾರ ಯಡಿಯೂರಪ್ಪ ಶಿರಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದರು.


ಇದೇ ವೇಳೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಇಂದು ಆರ್. ಆರ್. ನಗರದಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ.