ಇತ್ತೀಚಿನ ಸುದ್ದಿ
ರಾಗಿಣಿ ದ್ವಿವೇದಿ, ಸಂಜನಾಗೆ 14 ದಿನಗಳ ನ್ಯಾಯಾಂಗ ಬಂಧನ
September 14, 2020, 11:02 AM

ಬೆಂಗಳೂರು(reporterkarnataka news): ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಅವರನ್ನು ಇದೀಗ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಿಸಿಬಿ ಕಸ್ಟಡಿ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಇಂದು ಇಬ್ಬರು ನಟಿಯರನ್ನು ನ್ಯಾಯಾಲಯದ ಮುಂದೆ ವೀಡಿಯೊ ಕಾನ್ಪರೆನ್ಸ್ ಮೂಲಕ ಹಾಜರುಪಡಿಸಲಾಯಿತು.
ವಿಚಾರಣೆ ಸಂದರ್ಭದಲ್ಲಿ ಸಿಸಿಬಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಹೆಚ್ಚಿನ ಅವಧಿಗೆ ಕಸ್ಟಡಿಗೆ ಕೋರದ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.