ಇತ್ತೀಚಿನ ಸುದ್ದಿ
ನಟಿ ರಾಗಿಣಿ ದ್ವಿವೇದಿ ವಿಚಾರಣೆ ಆರಂಭ
September 6, 2020, 8:30 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ನಂಟಿನ ಆರೋಪಕ್ಕೆ ತುತ್ತಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ವಿಚಾರಣೆ ಇದೀಗ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರಂಭವಾಗಿದೆ.
ಸಿಸಿಬಿ ಇನ್ಸ್ ಪೆಕ್ಟ್ ರ್ ಅಂಜುಮಾಲಾ ನಾಯಕ್ ನೇತೃತ್ವದಲ್ಲಿ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ನಾಳೆ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ಈ ಮಧ್ಯೆ ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್ ಕಾಪೋರೇಟರ್ ಕೇಶವ ಮೂರ್ತಿ ಪುತ್ರ ಯಶಸ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ. ಮುಂಬೈನಲ್ಲಿ ವಿಚಾರಣೆ ನಡೆಯಲಿದೆ.
ಈ ಬೆಳವಣಿಗೆಯ ಮಧ್ಯೆ ರಾಗಿಣಿಯಿಂದ ಅಂತರ ಕಾಪಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದೆ. ರಾಗಿಣಿ ದ್ವಿವೇದಿಗೂ ಬಿಜೆಪಿಗೂ ಸಂಬಂಧ ಇಲ್ಲ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅವರು ಸ್ವಯಂ ಪ್ರೇರಿತರಾಗಿ ಪ್ರಚಾರ ನಡೆಸಿದ್ದರು. ಚುನಾವಣೆ ಸಂದರ್ಭದಲ್ಲಿ ಹಲವರು ಈ ರೀತಿ ಮಾಡುತ್ತಾರೆ. ಇದರಲ್ಲಿ ಪಕ್ಷದ ಪಾತ್ರ ಇಲ್ಲ ಎಂದು ಗಣೇಶ್ ಕಾರ್ನಿಕ್ ಹೇಳಿದ್ದಾರೆ.