2:32 PM Friday26 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಲ್ಲಿ ಪತ್ರ ಸಮರ: ರಾಹುಲ್ ಹೇಳಿಕೆಗೆ ಕಪಿಲ್ ಸಿಬಾಲ್ ಕೆಂಡಾಮಂಡಲ

August 24, 2020, 8:19 AM

ನವದೆಹಲಿ(reporterkarnataka news): ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ  ಪಕ್ಷದ 23 ನಾಯಕರ ವಿರುದ್ದ ವ್ಯಕ್ತಪಡಿಸಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಖ್ಯವಾಗಿ ಕಪಿಲ್ ಸಿಬಾಲ್ ಮತ್ತು  ಗುಲಾಂ ನಬಿ ಆಜಾದ್  ರಾಹುಲ್ ಗಾಂಧಿ ಅಭಿಪ್ರಾಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆ ನೀಡಲು ಸಿದ್ದವಿರುವುದಾಗಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಕಪಿಲ್ ಸಿಬಾಲ್ ಪಕ್ಷವನ್ನು ಬಿಕ್ಕಟ್ಟಿನ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ಪ್ರತಿನಿಧಿಸಿರುವುದನ್ನು  ಪ್ರಸ್ತಾಪಿಸಿದ್ದಾರೆ. ಬಿಜೆಪಿ ಜತೆ ಕೈ ಜೋ಼ಡಿಸಿದ್ದೇನೆ ಎಂಬ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ.

ಇದಕ್ಕೂ ಮೊದಲು ಮಾತನಾಡಿದ ರಾಹುಲ್ ಗಾಂಧಿ ಕೆಲವು ಹಿರಿಯ ನಾಯಕರು ಬರೆದ ಪತ್ರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.  ಸೋನಿಯಾ ಗಾಂಧಿ ಅವರು ಮನಸ್ಸಿಲ್ಲದಿದ್ದರೂ ಪಕ್ಷದ ಹಿತದೃಷ್ಟಿಯಿಂದ ಹಂಗಾಮಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದರು.

ಆದರೆ ಅದನ್ನು ಪರಿಗಣಿಸದೆ ಹಿರಿಯ ನಾಯಕರು ಪತ್ರದ ಮೂಲಕ ಅವರ  ನಾಯಕತ್ವ ಪ್ರಶ್ನಿಸಿದ್ದಾರೆ ಎಂದು ರಾಹುಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು