ಇತ್ತೀಚಿನ ಸುದ್ದಿ
ರೈತ ಮುಖಂಡರ ಜತೆ ಸಿಎಂ ಯಡಿಯೂರಪ್ಪ ಇಂದು ಏನು ಚರ್ಚೆ ನಡೆಸಲಿದ್ದಾರೆ ?
September 29, 2020, 8:44 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ರೈತರು ಪ್ರತಿಭಟನೆ ಹಾದಿ ಹಿಡಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ರೈತ ಮುಖಂಡರ ಜತೆ ಮಾತುಕತೆ ನಡೆಸಲಿದ್ದಾರೆ. ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನು ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ನಾನು ಕೂಡ ರೈತರ ಮಗ. ರೈತರ ಕಷ್ಟ ಅರಿತವ. ಈ ವಿಷಯದಲ್ಲಿ ಯಾವುದೇ ರಾಜೀ ಇಲ್ಲ ಎಂದು ಮುಖ್ಯಮಂತ್ರಿ ಸೋಮವಾರ ಸ್ಪಷ್ಟಪಡಿಸಿದ್ದರು. ರಾಜ್ಯದ ಮೂಲೆ ಮೂಲೆಗೆ ತೆರಳಿ ರೈತರಿಗೆ ವಾಸ್ತವ ಸ್ಥಿತಿ ತಿಳಿಸುವುದಾಗಿಯೂ ಅವರು ಹೇಳಿದ್ದರು.