6:58 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಬಂದ್‌ ಯಶಸ್ವಿ 

November 26, 2020, 7:56 PM

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಶ್ರೀನಿವಾಸಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಗುರುವಾರ ನೀಡಲಾಗಿದ್ದ ಬಂದ್‌ ಕರೆ ಯಶಸ್ವಿಯಾಯಿತು.

 ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲ್ಪಟ್ಟಿತ್ತು.  ವಾಹನಗಳು ರಸ್ತೆಗೆ ಇಳಿಯಲಿಲ್ಲ. ಸತತವಾಗಿ ಮಳೆ ಸುರಿಯುತ್ತಿದ್ದ ಪರಿಣಾಮವಾಗಿ ಜನ ಸಂದಣಿ ಸಹಜವಾಗಿಯೆ ಕಡಿಮೆ ಇತ್ತು. ಸರ್ಕಾರಿ ಕಚೇರಿಗಳು ತೆರೆದಿದ್ದವಾದರೂ ಜನರೇ ಇರಲಿಲ್ಲ.

  ಪಟ್ಟಣದ ಎಂಜಿ ರಸ್ತೆಯಲ್ಲಿ ವಿವಿಧ ಕಾರ್ಮಿಕ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು ಸುರಿಯುವ ಮಳೆಯಲ್ಲಿ ಕೊಡೆ ಹಿಡಿದು ರಸ್ತೆ ತಡೆ ನಡೆಸಿದರು. ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಘಟಕದ ಉಪಾಧ್ಯಕ್ಷೆ ಜಿ.ಈಶ್ವರಮ್ಮ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯಿಂದಾಗಿ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು..

  ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಮಾತನಾಡಿ, ರೈತ ಸ್ನೇಹಿಯಲ್ಲದ ನೀತಿಗಳ ಪರಿಣಾಮವಾಗಿ ಕೃಷಿಕ ಸಮುದಾಯ ಸಾಲದ ಸುಳಿಗೆ ಸಿಕ್ಕಿ ನಲುಗಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ, ವಿದ್ಯುತ್‌ ಕಾಯ್ದೆಯಂಥ ಕಾಯ್ದೆಗಳು ರೈತ ಸಂಕುಲಕ್ಕೆ ಮಾರಕವಾಗಿವೆ. ಇವುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

  ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಪಾತಕೋಟ ನವೀನ್‌ ಕುಮಾರ್‌, ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀರಾಮರೆಡ್ಡಿ,  ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ನಾಗಭೂಷಣ, ಶ್ರೀನಿವಾಸ್, ಮಮತ, ಮೂರ್ತಿ, ಪುಷ್ಪ, ರಾಧಮ್ಮ, ವೆಂಕಟರವಣಪ್ಪ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು