ಇತ್ತೀಚಿನ ಸುದ್ದಿ
ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ ಬಾದಲ್ : ಪದ್ಮವಿಭೂಷಣ ಪ್ರಶಸ್ತಿ ವಾಪಸ್
December 3, 2020, 6:52 PM

ನವದೆಹಲಿ(reporterkarnataka news):
ಕೇಂದ್ರ ಸರಕಾರದ ಹೊಸ ಕೃಷಿ ಕಾನೂನಿನ ವಿರುದ್ಧ ರೈತರ ಪರ ಬೆಂಬಲಕ್ಕೆ ನಿಂತ ಅಕಾಲಿ ದಳದ ಹಿರಿಯ ನಾಯಕ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ತಮಗೆ ನೀಡಿದ್ದ ಪದ್ಮ ವಿಭೂಷಣ ಪ್ರಶಸ್ತಿಯನ್ನು ಕೇಂದ್ರ ಸರಕಾರಕ್ಕೆ ಹಿಂತಿರುಗಿಸಿದ್ದಾರೆ.
ಕೇಂದ್ರ ಸರಕಾರ ರೈತ ಮುಖಂಡರ ಜತೆ
ದೆಹಲಿ ವಿಜ್ಞಾನ ಭವನದಲ್ಲಿ ಮಾತುಕತೆ ನಡೆಸುತ್ತಿರುವುದರ ನಡುವೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿರುವ ಪ್ರಕಾಶ್ ಸಿಂಗ್ ಬಾದಲ್, ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿರುವುದಾಗಿ ಹೇಳಿದ್ದಾರೆ.
ರೈತರ ಬೇಡಿಕೆಗಳನ್ನು ಪರಿಗಣಿಸದಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ತನಗೆ 2015ರಲ್ಲಿ ನೀಡಲಾಗಿದ್ದ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ವಿಭೂಷಣವನ್ನು ಹಿಂತಿರುಗಿಸುವುದಾಗಿ ತಿಳಿಸಿದ್ದಾರೆ.