ಇತ್ತೀಚಿನ ಸುದ್ದಿ
ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ
November 30, 2020, 8:18 AM

ಚೆನ್ನೈ(reporterkarnataka news): ಹೊಸ ರಾಜಕೀಯ ಪಕ್ಷ ಸ್ಥಾಪನೆ ಸಂಬಂಧ ಖ್ಯಾತ ನಟ ರಜನಿಕಾಂತ್ ತಮ್ಮ ಅಭಿಮಾನಿಗಳ ಮಹತ್ವದ ಸಭೆಯನ್ನು ಇಂದು ಕರೆದಿದ್ದಾರೆ. ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಸಭೆ ಆಯೋಜಿಸಲಾಗಿದೆ. ಬೆಳಿಗ್ಗೆ 9 ಗಂಟೆಗೆ ಸಭೆ ನಡೆಯಲಿದೆ.
ಕೆಲವು ದಿನಗಳ ಹಿಂದೆ ರಜನಿಕಾಂತ್ ಸದ್ಯಕ್ಕೆ ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ ಎಂದು ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಜನಿಕಾಂತ್ ತಮ್ಮ ಅಭಿಮಾನಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ