ಇತ್ತೀಚಿನ ಸುದ್ದಿ
ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು: ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ
October 1, 2020, 8:14 AM

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ಇಂದು ನಡೆಯಲಿದೆ. ವಿಧಾನಸಭಾ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ಸಂಬಂಧ ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.
ಆರ್ ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಅಂತಿಮ ಪಡಿಸಲಿದೆ.
ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಿಜೆಪಿಗೆ ತಲೆ ನೋವಾಗಿದೆ. ಮುನಿರತ್ನಂ ಈ ಕ್ಷೇತ್ರದಲ್ಲಿ ಬಿಜೆಪಿಯ ಟಿಕೇಟ್ ಆಕಾಂಕ್ಷಿಗಳಾಗಿದ್ದಾರೆ. ಬಿಜೆಪಿಯ ಒಂದು ಬಣ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಇಂದಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ