ಇತ್ತೀಚಿನ ಸುದ್ದಿ
ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್
November 30, 2020, 7:02 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ತಳಮಟ್ಟದ ಚುನಾವಣಾ ಕದನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 22 ಮತ್ತು 27ರಂದು ಎರಡು ಹಂತಗಳಲ್ಲಿ ರಾಜ್ಯದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದೆ.
ರಾಜ್ಯದ 30 ಜಿಲ್ಲೆಗಳಲ್ಲಿ ಹರಡಿರುವ ಒಟ್ಟು 6004 ಗ್ರಾಮ ಪಂಚಾಯತ್ ಗಳ ಪೈಕಿ 5762 ಗ್ರಾಮ ಪಂಚಾಯತ್ ಗಳಲ್ಲಿ ಚುನಾವಣೆ ನಡೆಯಲಿದೆ. ಕಾನೂನು ಸಮರ ಸೇರಿದಂತೆ ವಿವಿಧ ಕಾರಣಗಳಿಂದ 242 ಪಂಚಾಯತ್ ಗಳಲ್ಲಿ ಚುನಾವಣೆ ಮುಂದೂಡಲಾಗಿದೆ. ರಾಜ್ಯದ 92, 121 ಗ್ರಾಮ ಪಂಚಾಯತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಪ್ರತಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಪ್ರದೇಶಗಳಲ್ಲಿ ನಾಮಪತ್ರ ಸಲ್ಲಿಕೆ ಡಿಸೆಂಬರ್ 7ರಂದು ಆರಂಭವಾಗಲಿದೆ. ಡಿಸೆಂಬರ್ 11 ಕೊನೆಯ ದಿನ
ಎರಡನೆ ಹಂತದಲ್ಲಿ ಚುನಾವಣೆ ಎದುರಿಸುವ ಪ್ರದೇಶಗಳಲ್ಲಿ ಡಿಸೆಂಬರ್ 11 ನಾಮಪತ್ರ ಸಲ್ಲಿಕೆಗೆ ಆರಂಭವಾಗಲಿದ್ದು, 16 ಕೊನೆಯ ದಿನವಾಗಿದೆ.
ಮತದಾನ ಡಿಸೆಂಬರ್ 22 ಮತ್ತು 27ರಂದು ನಡೆಯಲಿದೆ. ಮತ ಎಣಿಕೆ ಡಿಸೆಂಬರ್ 30. ಮೂರು ರಾಜಕೀಯ ಪಕ್ಷಗಳಿಗೆ ಈ ಚುನಾವಣೆ ಪ್ರತಿಷ್ಟೆಯ ಪ್ರಶ್ನೆಯಾಗಿದೆ.
2, 96, 15,048 ಮತದಾರರು ಈ ಚುನಾವಣೆಯಲ್ಲಿ ಮತದಾನಕ್ಕೆ ಅರ್ಹರಾಗಿದ್ದಾರೆ. ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದೆ.