6:24 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಆ.15ರ ಬಳಿಕ ಕಠಿಣ ನಿಯಮ ಜಾರಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಸುಳಿವು

13/08/2021, 15:23

ಉಡುಪಿ (reporterkarnataka.com): ರಾಜ್ಯದಲ್ಲಿ ಕೊರೊನಾ ಸೋಂಕು ಚಿಕ್ಕ ಮಕ್ಕಳಲ್ಲಿ ಕೂಡ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಸಲಹೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚು ಕಂಡು ಬಂದರೆ ಬೆಂಗಳೂರಿನಲ್ಲಿ ಬಿಗಿಕ್ರಮ ಕೈಗೊಳ್ಳಲಾಗುವುದು. ಕಳೆದ 40 ದಿನಗಳಿಂದ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಕ್ಕಳಲ್ಲಿ ಕೂಡ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಆ.15ರ ಬಳಿಕ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು