ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ: ಬಸ್, ಸರಕು ಸಾಗಾಟ ವಾಹನಗಳಿಗೆ ಅವಕಾಶ
December 24, 2020, 8:53 AM

ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣ ಸಂಬಂಧ ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ, ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆ ತನಕ ಇದು ಜಾರಿಯಲ್ಲಿ ಇರಲಿದೆ. ಆದರೆ ರಾತ್ರಿ ವೇಳೆ ಬಸ್ ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ, ಅದೇ ರೀತಿ ಸರಕು ಸಾಗಾಟ ವಾಹನಗಳಿಗೂ ಅವಕಾಶ ಕಲ್ಪಿಸಲಾಗಿದೆ. ಲಂಡನ್ ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮ ತೆಗೆದುಕೊಂಡಿದೆ.