10:48 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಮಡಿಲಿನಲ್ಲಿ ರೇಣುಕಾಚಾರ್ಯ ಕೆಂಡ, ಮತ್ತೆ ಭಿನ್ನರಾಗ ಸ್ಫೋಟ

November 19, 2020, 9:24 PM

ಬೆಂಗಳೂರು(reporterkarnataka news): ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಮೂಲ ಬಿಜೆಪಿ ಹಾಗೂ ವಲಸಿಗರ ನಡುವೆ ಕತ್ತಿ ಮಸೆಯುವುದು ಆರಂಭಗೊಂಡಿದೆ. ಇದಲ್ಲದೆ ಮೂಲ ಬಿಜೆಪಿಯೊಳಗೆ ಎರಡು ಬಣ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಒಂದು ಬಣವಾದರೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರದ್ದು ಇನ್ನೊಂದು ಬಣ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಈ ಎಲ್ಲ ಬಣಗಳು ಸಕ್ರಿಯವಾಗುತ್ತಿದ್ದು, ಸಚಿವ ಸ್ಥಾನದ ಮೇಲೆ ಆರಂಭದಿಂದಲೂ ಕಣ್ಣಿಟ್ಟಿರುವ ಮುಖ್ಯ ಮಂತ್ರಿಗಳ ಕಾರ್ಯದರ್ಶಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. 

 ರಾಜ್ಯ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆಗೆ ಸಿದ್ಧತೆ ನಡೆಯುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಯಾದ ರೇಣುಕಾಚಾರ್ಯ ಹೊಸ ವರಸೆ ಆರಂಭಿಸಿದ್ದಾರೆ. ತನ್ನ ಸಂಪರ್ಕದಲ್ಲಿ 40 ಶಾಸಕರಿದ್ದಾರೆ. ಅವರೊಂದಿಗೆ ಸಭೆ ನಡೆಸುವುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಮುಂದೆಯೇ ರೇಣುಕಾಚಾರ್ಯ ಹೆಡೆ ಬಿಚ್ಚಿದ್ದಾರೆ.

ಸಚಿವ ಸ್ಥಾನ ಬಿಡಲು ಕೆಲ ಸಚಿವರು ರೆಡಿ ಇಲ್ಲ ಎಂಬುದಾಗಿ 

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎದುರು ಅಸಮಾಧಾನ ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಸಿಎಂ ಮೇಲೆ ಒತ್ತಡ ಹೇರಲು ಕೆಲವರಿಂದ ಸಭೆ ನಡೆಸಲಾಗುತ್ತದೆ ಎಂದ ರೇಣುಕಾಚಾರ್ಯಗೆ ನಳಿನ್  ಅವರು, ಸಭೆ ನಡೆಸುವುದು ಬೇಡ. ನೀವು ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತನಾಡಿ, ನಾನು ಕೂಡ ಸಿಎಂ ಜೊತೆ ಚರ್ಚಿಸುವೆ ಎಂಬುದಾಗಿ ರೇಣುಕಾಚಾರ್ಯ ಅವರನ್ನು ಸಮಾಧಾನ ಪಡಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಮುನ್ನವೇ ಅಸಮಾಧಾನ ಸ್ಪೋಟಗೊಂಡಿದೆ.

ಈ ಹಿಂದೆಯೂ ಯಡಿಯೂರಪ್ಪ ಸರಕಾರ ಇರುವಾಗ ರೇಣುಕಾಚಾರ್ಯ ಸಚಿವ ಸ್ಥಾನಕ್ಕಾಗಿ ಭಿನ್ನಮತ ಪ್ರದರ್ಶಿಸಿದ್ದರು. ಕೆಲವು ಶಾಸಕರ ಜತೆ ರೆಸಾರ್ಟ್ ರಾಜಕಾರಣ ಮಾಡಿ ಪಕ್ಷದ ನಾಯಕರು ಮೇಲೆ ಪ್ರಭಾವ ಬೀರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು