ಇತ್ತೀಚಿನ ಸುದ್ದಿ
ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ ಘೋಷಣೆ?
November 27, 2020, 7:42 AM

ಬೆಂಗಳೂರು(reporterkarnataka news): ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿದೆ. ಹಲವು ಮಹತ್ವದ ತೀರ್ಮಾನಗಳನ್ನು ಸಭೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
ವಿಜಯ ನಗರ ಜಿಲ್ಲೆ ರಚನೆ ಅಧಿಕೃತವಾಗಿ ಘೋಷಣೆ ಮತ್ತು ವೀರ ಶೈವ ಲಿಂಗಾಯತವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸುವ ಶಿಫಾರಸು ಮಾಡುವ ಸಾಧ್ಯತೆಯಿದೆ.
ಸಭೆಯ ಬಳಿಕ ಸಿಎಂ ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.