ಇತ್ತೀಚಿನ ಸುದ್ದಿ
ರಾಜ್ಯ ಸಂಪುಟ ವಿಸ್ತರಣೆ: ಈ ಬಾರಿಯಾದರೂ ಸುಳ್ಯ ಶಾಸಕ ಅಂಗಾರಗೆ ಸಿಗುತ್ತಾ ಸಚಿವ ಸ್ಥಾನ ?
January 11, 2021, 9:39 AM

ಬೆಂಗಳೂರು(reporterkarnataka news): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, 7ರಿಂದ 8 ಮಂದಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ವರಿಷ್ಠರು ಒಲವು ತೋರಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಹೊಸತಾಗಿ ಸೇರ್ಪಡೆಗೊಳ್ಳುವ ಸಚಿವರಲ್ಲಿ ಸುಳ್ಯ ಶಾಸಕ ಎಸ್. ಅಂಗಾರ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಹೆಸರು ಕೇಳಿ ಬರುತ್ತಿದೆ.
ಸಂಪುಟದಲ್ಲಿ 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿಯ ಅತ್ಯಂತ ಹಿರಿಯ ಶಾಸಕ ಎಸ್. ಅಂಗಾರ ಅವರಿಗೆ ಈ ಬಾರಿ ಅವಕಾಶ ನೀಡಲಾಗುತ್ತಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ 7 ಮಂದಿ ಬಿಜೆಪಿ ಶಾಸಕರು ಆಯ್ಕೆಗೊಂಡರೂ ಜಿಲ್ಲೆಗೆ ಸಚಿವ ಸ್ಥಾನದ ಭಾಗ್ಯ ಸಿಗಲಿಲ್ಲ. ಉಡುಪಿ ಜಿಲ್ಲೆಯ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೊಂದು ರೀತಿಯಲ್ಲಿ ಜಿಲ್ಲೆಗೆ ಮಾಡಿದ ಅವಮಾನ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗಾರ ಅವರನ್ನು ಸಚಿವರಾಗಿ ಮಾಡಿದರೆ, ಜಿಲ್ಲೆಗೆ ಪ್ರಾತಿನಿಧ್ಯ ನೀಡಿದ ಹಾಗೆಯೂ ಆಗುತ್ತದೆ, ಹಿರಿಯ ಶಾಸಕರಿಗೆ ಸ್ಥಾನಮಾನ ಕಲ್ಪಿಸದ ಹಾಗೆಯೂ ಆಗುತ್ತದೆ ಎಂದು ಬಿಜೆಪಿ ವರಿಷ್ಠರು ಲೆಕ್ಕಾಚಾರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.