ಇತ್ತೀಚಿನ ಸುದ್ದಿ
ರಾಜ್ಯ ವಿಧಾನಮಂಡಲ ಅಧಿವೇಶನ ನಾಳೆಯಿಂದ ಆರಂಭ: ಏನೆಲ್ಲ ವಿಷಯ ಚರ್ಚೆಗೆ ಬರಲಿದೆ?
September 20, 2020, 8:19 AM

ಬೆಂಗಳೂರು(reporterkarnataka news): ಕೊರೊನಾ ಮಹಾಮಾರಿಯ ಮಧ್ಯೆ ನಾಳೆ ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಸದನದಲ್ಲಿ ಸಾಮಾಜಿಕ ಅಂತರ ಪಾಲನೆಗೆ ಆದ್ಯತೆ ನೀಡಲಾಗಿದೆ. ಎಲ್ಲ ಶಾಸಕರು ಕೊರೊನಾ ಪರೀಕ್ಷೆಗೆ ಒಳಗಾಗಬೇಕಿದೆ. ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಕಲಾಪದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು
ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ. ಪ್ರೇಕ್ಷಕರ ಗ್ಯಾಲರಿಯಲ್ಲಿ ಪತ್ರಕರ್ತರಿಗೆ ಅವಕಾಶ ಕಲ್ಪಿಸಲಾಗಿದೆ.