ಇತ್ತೀಚಿನ ಸುದ್ದಿ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಖಾಡದಿಂದ ಹಿಂದೆ ಸರಿದ ಮಿಥುನ್ ರೈ: ಕಾರಣ ಏನು ಗೊತ್ತೇ?
January 10, 2021, 7:36 AM

ಮಂಗಳೂರು(reporterkarnataka news) : ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಗೆ ನಡೆಯಲಿರುವ ಚುನಾವಣೆದಿಂದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಹಿಂದೆ ಸರಿದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಉಮೇದುವಾರಿಕೆ ಯಿಂದ ಹಿಂದೆ ಸರಿದಿದ್ದೇನೆ. ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.