6:19 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

January 16, 2021, 9:06 PM

ಮಂಗಳೂರು(reporterkarnataka news): ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಲು ಹಾಗೂ ಎಲ್ಲಾ ಸರ್ಕಾರಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲು ಆಗ್ರಹಿಸಿ ಎಬಿವಿಪಿ ಮಂಗಳೂರು ವತಿಯಿಂದ  ಹಂಪನಕಟ್ಟೆ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಕೋವಿಡ್ ನಂತರದಲ್ಲಿ ಎಲ್ಲ ಶಾಲಾ-ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿರುವುದು ಸಂತಸದ ವಿಷಯ. ಆದರೆ ಸರ್ಕಾರಿ ಕಾಲೇಜುಗಳಿಗೆ ಇದುವರೆಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡದೆ ಇರುವುದನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಕೋವಿಡ್ ಕಾರಣದಿಂದ ಶೈಕ್ಷಣಿಕ ಚಟುವಟಿಕೆಗಳು ಹಲವು ತಿಂಗಳುಗಳ ಕಾಲ ಆನ್ಲೈನ್ ಮುಖಾಂತರ ನಡೆಯುತ್ತಿದ್ದವು ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ತರಗತಿಗಳನ್ನು ಸೂಕ್ತವಾಗಿ ನಡೆಸಿವೆ. ಆದರೆ ಸರಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದ ಸಾಕಷ್ಟು ಪ್ರಮಾಣದ ಪಾರು ಚಟುವಟಿಕೆಗಳು ನಡೆದಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ರಾಜ್ಯದ ಎಲ್ಲಾ ಪದವಿ ಕಾಲೇಜುಗಳಿಗೆ ತಕ್ಷಣದಿಂದಲೇ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕೆಂದು ಪ್ರತಿಭಟನೆಯನ್ನು ಉದ್ದೇಶಿಸಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್  ಆಗ್ರಹಿಸಿದರು

ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳು ಪುನರಾರಂಭಗೊಂಡಿದೆ. ಆದರೆ ಸರ್ಕಾರಿ ವಸತಿ ನಿಲಯ ಗಳಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ನಿರಾಕರಿಸುತ್ತಿದೆ. ಆದ್ದರಿಂದ ಸರ್ಕಾರಿ ವಸತಿ ನಿಲಯಗಳಿಗೆ ಎಲ್ಲ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ನೀಡಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ. 

ಪ್ರತಿಭಟನೆಯಲ್ಲಿ ಎಬಿವಿಪಿ ಮಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ನಗರ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ , ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ದೀಪ್ತಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ನಿಶಾನ್ ಆಳ್ವ , ಅಕ್ಷಯ್ ಕಾಮಾಜೆ, ನಗರ ಸಹ ಕಾರ್ಯದರ್ಶಿ ಶ್ರೇಯಸ್ , ವಿದ್ಯಾರ್ಥಿ ನಾಯಕರಾದ ನೀಲೇಶ್, ಆದಿತ್ಯ ಶೆಟ್ಟಿ, ಭವನಿಷ್ , ಆದರ್ಶ್ , ರೋಹನ್, ಧನುಷ್, ರಜತ್ , ಧನುಷ್ , ಯಕ್ಷಿತ , ಕವನ  ಆದಿತ್ಯ ಕೆ ಆರ್, ಸಂಜನ್, ಸಾಯಿ ಶರಣ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು