ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ರೈತರಿಂದ ನಾಳೆ ವಿಧಾನಸೌಧಕ್ಕೆ ಮುತ್ತಿಗೆ , ಬಾರುಕೋಲು ಚಳವಳಿ
December 8, 2020, 4:31 PM

ಬೆಂಗಳೂರು(reporterkarnataka news): ಕೇಂದ್ರದ ಕೃಷಿ ನೀತಿ ವಿರೋಧಿಸಿ ನಾಳೆ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ರೈತ ಸಂಘಟನೆಗಳು ನಿರ್ಧರಿಸಿವೆ. ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಅವರು ತಮ್ಮ ಬೆಂಬಲ ಸೂಚಿಸಿದ್ದಾರೆ.
ರಾಜ್ಯಪಾಲರಿಗೂ ಈ ಸಂಬಂಧ ಮನವಿ ಪತ್ರ ಸಲ್ಲಿಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ. ರೈತರ ಇಂದಿನ ಪ್ರತಿಭಟನೆ ಇದೀಗ ಕೊನೆಗೊಂಡಿದೆ.