12:29 AM Sunday24 - January 2021
ಬ್ರೇಕಿಂಗ್ ನ್ಯೂಸ್
ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ? 

ಇತ್ತೀಚಿನ ಸುದ್ದಿ

ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಕೊಡಗಿನಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ

August 10, 2020, 3:24 AM

ಬೆಂಗಳೂರು(reporterkarnataka news): ರಾಜ್ಯದ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.  ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. 

ದಕ್ಷಿಣ ಕನ್ನಡ, ಕೊಡಗು, ಹಾಸನ , ಚಿಕ್ಕಮಗಳೂರು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಹಾಸನ, ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದೆ . ಜಿಲ್ಲೆಯ ಪ್ರಮುಖ ಡ್ಯಾಮ್ ಗಳು ತುಂಬಿವೆ.

ನೇತ್ರಾವತಿ, ಕುಮಾರಧಾರ, ತುಂಗಾ, ಭದ್ರೆ, ಘಟಪ್ರಭಾ ನದಿಗಳು ತುಂಬಿ ಹರಿಯುತ್ತಿವೆ.

ಹೇಮಾವತಿ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ. ಕೊಡಗಿನಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಮಧ್ಯೆ ಬ್ರಹ್ಮಗಿರಿ ಬೆಟ್ಟದಲ್ಲಿ ಇಂದು ಮುಂಜಾನೆ ನಾಪತ್ತೆಯಾದ ಅರ್ಚಕರ ಕುಟುಂಬ ಸದಸ್ಯರ ಪತ್ತೆಗೆ ಶೋಧ ಕಾರ್ಯ  ಬಿರುಸು ಪಡೆದುಕೊಂಡಿದೆ.  ಮೂರು ಹಿಟಾಚಿ ಯಂತ್ರಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು