7:31 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆ: ಕೆ ಆರ್ ಎಸ್ ಒಳ ಹರಿವು ಹೆಚ್ಚಳ, ಅಪಾಯದ ಮಟ್ಟ ಮೀರಿದ ನೇತ್ರಾವತಿ

August 8, 2020, 6:05 AM

ಬೆಂಗಳೂರು(reporterkarnatakanews): ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಉತ್ತರ ಕರ್ನಾಟಕ ಮತ್ತು ಮಲೆ ನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬಂಟ್ವಾಳ ಮಾರುಕಟ್ಟೆಗೆ ನೀರು ನುಗ್ಗಿದೆ.  ಬೆಳ್ತಂಗಡಿಯ ಕೆಲವು ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.  ದಿಡುಪೆಯಲ್ಲಿ  ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ. 

ಸಕಲೇಶಪುರದಲ್ಲಿ ಮಳೆಯ ಅಬ್ಬರ  ಇದೆ. ಕಳಸ ಸಮೀಪದ ಹೆಬ್ಬಾಳೆ ಸೇತುವೆ ನೀರಿನಲ್ಲಿ ಮುಳುಗಿದೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ.  ಬೆಳಗಾವಿಯಲ್ಲಿ  ಉತ್ತಮ ಮಳೆಯಾಗುತ್ತಿದೆ. ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದೆ.

ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು,  ಕೃಷ್ಣಾ ಮತ್ತು ಅದರ ಉಪ ನದಿಗಳು ತುಂಬಿ ಹರಿಯುತ್ತಿವೆ. 

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೆ ಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಾಗಿದೆ ಒಳ ಹರಿವು . 67, 817 ಕ್ಯೂಸೆಕ್  ತಲುಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು