ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಒಂದೇ ದಿನ 126 ಬಲಿ
August 19, 2020, 3:34 PM

ಬೆಂಗಳೂರು(reporterkarnataka news):
ರಾಜ್ಯದಲ್ಲಿ ಮಾರಕ ಕೊರೊನಾ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಹೊಸದಾಗಿ 8642 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದು ಒಂದು ದಿನ ವರದಿಯಾದ ಇದವರೆಗಿನ ಅತ್ಯಧಿಕ ಪ್ರಕರಣವಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2, 49, 590ಕ್ಕೆ ಏರಿದೆ. ಬೆಂಗಳೂರಿನಲ್ಲಿ 24 ಗಂಟೆಯಲ್ಲಿ 2804 ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 98, 910ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಕೊರೋನಾಕ್ಕೆ 56 ಮಂದಿ ಮೃತಪಟ್ಟಿದ್ದಾರೆ. ಕೊರೋನಾದಿಂದ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 1588ಕ್ಕೆ ತಲುಪಿದೆ.