ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ನಾಳೆ ಚುನಾವಣೆ ನಡೆದರೂ ಕಾಂಗ್ರೆಸ್ ಅಧಿಕಾರಕ್ಕೆ; ಮಾಜಿ ಸಿಎಂ ಸಿದ್ದರಾಮಯ್ಯ
January 1, 2021, 8:15 AM

ಬೆಂಗಳೂರು(reporterkarnataka news):
ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಯಡಿಯೂರಪ್ಪ ಅವರ ಮುಖ್ಯಮಂತ್ರಿ ಕುರ್ಚಿಯೇ ಅಲ್ಲಾಡ್ತಿದೆ. ಅದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ನಾವು
ಸ್ಪಷ್ಟ ಬಹುಮತ ಪಡೆದು ಅಧಿಕಾರ ಪಡೆಯಲಿದ್ದೇವೆ ಎಂದರು.
ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪ ಅವರು ಬಿಜೆಪಿ ಶೇ.60ರಷ್ಟು ಗ್ರಾಮ ಪಂಚಾಯತ್ ಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತ್ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ ಎಂದು ಹೇಳಿದರು.
….