ಇತ್ತೀಚಿನ ಸುದ್ದಿ
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ: ಇಂದು ಸಂಜೆ ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಸಭೆ
October 23, 2020, 12:48 PM

ಬೆಂಗಳೂರು(reporterkarnataka news): ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಂಬಂಧ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 4.30ಕ್ಕೆ ಸಭೆ ನಿಗದಿಯಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಜ್ಯದ ನಾಡು ನುಡಿಗೆ ಅಮೋಘ ಕೊಡುಗೆ ಸಲ್ಲಿಸಿದ ಗಣ್ಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು