11:47 PM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಬೊಂದೆಲ್ ನಲ್ಲಿ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

October 20, 2020, 7:46 PM

ಮಂಗಳೂರು (reporter Karnataka News)

ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಬೊಂದೆಲ್ ನಲ್ಲಿ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಲಾವಿದರ ಜತೆ ಜಿಲ್ಲಾಧಿಕಾರಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ಮಂಗಳವಾರ ನಡೆಯಿತು.

ಕಲಾವಿದರ ಸಲಹೆ, ಸಹಕಾರದೊಂದಿಗೆ ಸುಸಜ್ಜಿತ ರಂಗ ಮಂದಿರ ನಿರ್ಮಾಣವಾಗಲಿದ್ದು, ಆದಷ್ಟು ಬೇಗ ಕಾಮಗಾರಿ ಆರಂಭಗೊಳ್ಳಲಿದೆ. ಈ ಸಂಬಂಧ ಸಂಪೂರ್ಣ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ಬಜೆಟ್ ತಯಾರಿಸಲು ಶಾಸಕರು ಸೂಚಿಸಿದ್ದಾರೆ.

ಕಾರ್ಯಕ್ರಮದಲ್ಲಿ ಶಾಸಕರ ಜತೆಗೆ ಸ್ಥಳೀಯ ಭಾಗದ ಕಾರ್ಪೊರೇಟರ್ ಲೋಹಿತ್ ಅಮೀನ್, ಸನಾತನ ನಾಟ್ಯಾಲಯದ ಚಂದ್ರಶೇಖರ ಶೆಟ್ಟಿ, ಮಂಗಳೂರು ರಂಗಭೂಮಿ ಗೌರವಾಧ್ಯಕ್ಷ ರಾಮಚಂದ್ರ ಬೈಕಂಪಾಡಿ, ರಂಗಸಂಗಾಂತಿ ಸಂಸ್ಥೆಯ ಅಧ್ಯಕ್ಷ ಶಶಿರಾಜ್ ಕಾವೂರು, ಸಂಕೇತ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಗನ್ ಪವಾರ್, ಸ್ವರೂಪ ಸಮೂಹ ಸಂಸ್ಥೆಯ ಗೋಪಾಡ್ಕರ್, ಹಿರಿಯ ಚಿತ್ರಕಲಾವಿದ ಪ್ರಸಾದ್ ಆರ್ಟ್ಸ್ ಗ್ಯಾಲರಿಯ ಗಣೇಶ ಸೋಮಯಾಜಿ, ಯಕ್ಷಧ್ರುವ ಮಂಗಳೂರು ಅಧ್ಯಕ್ಷ ಪ್ರದೀಪ್ ಆಳ್ವ, ತುಳುನಾಟಕ ಕಲಾವಿದ ಮೋಹನ್ ಕೊಪ್ಪಳ ಉಪಸ್ಥಿತರಿದ್ದರು.
ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು