9:46 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಕಸ್ತೂರಿ ರಂಗನ್ ವರದಿಯಿಂದ ಬೆಳ್ತಂಗಡಿ ತಾಲೂಕಿನ 17 ಗ್ರಾಮಗಳ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

December 4, 2020, 6:27 PM

ಬೆಳ್ತಂಗಡಿ(reporter Karnataka news): ಪಶ್ಚಿಮ ಘಟ್ಟ ಸೂಕ್ಷ್ಮ ಪರಿಸರ ಪ್ರದೇಶ ಎಂದು ಗುರುತಿಸಲ್ಪಟ್ಟ ಬೆಳ್ತಂಗಡಿ ತಾಲೂಕಿನ 17 ಗ್ರಾಮಗಳನ್ನು ಕೈಬಿಡುವಂತೆ ಆಗ್ರಹಿಸಿ ಮಲೆನಾಡು ಹಿತರಕ್ಷಣಾ ವೇದಿಕೆ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನಸೌಧ ಎದುರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ತಹಶಿಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಕಸ್ತೂರಿ ರಂಗನ್ ವರದಿ ಜಾರಿಗೆ ಅಂತಿಮ ಗಡುವು ನೀಡಿರುವುದು ಕೃಷಿಕರಲ್ಲಿ ಭೀತಿಯನ್ನು ಉಂಟು ಮಾಡಿದೆ.  ಕೂಡಲೇ ವರದಿಯನ್ನು ಕೈ ಬಿಡಬೇಕೆಂದು ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನೆಲ್ಯಾಡಿ ಚರ್ಚ್ ಧರ್ಮ ಗುರು ಫಾ. ಆದರ್ಶ ವಿ.ಟಿ. ಸೆಬಾಸ್ಟಿಯನ್, ನಿತ್ಯಾನಂದ ಶೆಟ್ಟಿ, ಜನಹಿತ ವೇದಿಕೆಯ ತಾಲೂಕು ಸಂಚಾಲಕ ಸಂತೋಷ್ ಕುಮಾರ್ ಪುದುವೆಟ್ಟು ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು