5:25 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ

ಇತ್ತೀಚಿನ ಸುದ್ದಿ

ರಾಷ್ಟ್ರದ್ರೋಹ ಆರೋಪ: ಪತ್ರಕರ್ತನ ನೇಣುಗಂಬಕ್ಕೇರಿಸಿದ ಇರಾನ್ ಆಡಳಿತ

December 12, 2020, 6:56 PM

ಟೆಹರಾನ್:  ಇರಾನ್ ನಲ್ಲಿ ಪತ್ರಕರ್ತರೊಬ್ಬರನ್ನು ನೇಣು ಗಂಬಕ್ಕೆ ಏರಿಸಲಾಗಿದೆ. 47ರ ಹರೆಯದ ಪತ್ರಕರ್ತ ರೂಹೋಲ್ಲಾ  ಝ್ಯಾಮ್ ಎಂಬ ಪತ್ರಕರ್ತನನ್ನು ರಾಷ್ಟ್ರ ದ್ರೋಹ ಕೃತ್ಯಕ್ಕಾಗಿ ಮರಣ ದಂಡನೆ ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಅಧಿಕೃತ ಸುದ್ದಿ ಸಂಸ್ಥೆ ಇರ್ನಾ ವರದಿ ಮಾಡಿದೆ.

ಇರಾನ್ ನಲ್ಲಿ 2017ರಲ್ಲಿ ನಡೆದ ಸಾರ್ವತ್ರಿಕ ಪ್ರತಿಭಟನೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಪತ್ರಕರ್ತನನ್ನು ನೇಣು ಗಂಬಕ್ಕೆ ಏರಿಸಲಾಗಿದೆ.

ಆಹಾರ ಉತ್ಪನ್ನಗಳ ದರ ಹೆಚ್ಚಳದಿಂದ ಕಂಗೆಟ್ಟ ಜನರು ಇರಾನ್ ಆಡಳಿತದ ವಿರುದ್ಧ 2017ರಲ್ಲಿ ದಂಗೆ ಎದ್ದಿದ್ದರು. ಇದರಲ್ಲಿ ಪತ್ರಕರ್ತ ರೂಹೋಲ್ಲಾ ಪ್ರಮುಖ ಪಾತ್ರ ವಹಿಸಿದ್ದ ಎಂದು ಆರೋಪಿಸಲಾಗಿದೆ.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ರೂಹೋಲ್ಲಾ   ದೋಷಿ ಎಂದು ಪರಿಗಣಿಸಿತ್ತು.

ಮರಣ ದಂಡನೆ ಶಿಕ್ಷೆ ಜಾರಿಮಾಡಿರುವುದನ್ನು ಫ್ರಾನ್ಸ್ ಬಲವಾಗಿ ವಿರೋಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು