8:23 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಪೋಷಣ್ ಮಾಸಾಚರಣೆ: ಪೋಷಣ್ ರಥಯಾತ್ರೆಗೆ ಚಾಲನೆ

September 23, 2020, 7:51 PM

ಗದಗ(reporterkarnataka news): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗದಗ ಹಾಗೂ ಶಿಶು ಅಭಿವೃದ್ಧಿ ಇಲಾಖೆ (ಸಿಡಿಪಿಒ) ರೋಣ ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಅಂಗವಾಗಿ ಪೋಷಣ್ ರಥಯಾತ್ರೆಗೆ ಹಿರಿಯ ದಿವಾಣಿ ನ್ಯಾಯಾಧೀಶರ ಆವರಣದಲ್ಲಿ ತಾಲೂಕು ಹಿರಿಯ ದಿವಾಣಿ ನ್ಯಾಯಾಧೀಶೆ ನಾಗಮಣಿ ವಿ. ಬುಧವಾರ ಚಾಲನೆ ನೀಡಿದರು.

ಪೋಷಣ್ ರಥವು ರೋಣದ ಹಿರಿಯ ದಿವಾಣಿ ನ್ಯಾಯಾಲಯದ ಆವರಣದಿಂದ ಚಾಲನೆಗೊಂಡು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ನೀಡಲಾಯಿತು. ಜಾಥಾದಲ್ಲಿ ಪೌಷ್ಠಿಕ ಆಹಾರ ಶಿಬಿರ, ಮಾತೃ ವಂದನಾ ಯೋಜನೆ, ಭೇಟಿ ಪಡಾವೊ, ಬಾಲ್ಯವಿವಾಹ ವಿರುದ್ಧ ಜಾಗೃತಿ, ಭ್ರೂಣಹತ್ಯೆ ನಿಷೇಧ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಒಂದು ತಿಂಗಳು ಕಾಲ ಪಟ್ಟಣ ಸೇರಿದಂತೆ ಹಳ್ಳಿ-ಹಳ್ಳಿಗಳಲ್ಲಿ ಪೋಷಣ್ ರಥ ತೆರಳಿ ಜನ ಜಾಗೃತಿ ಮೂಡಿಸಲಿದೆ. ಗರ್ಭಿಣಿ ಮತ್ತು ಬಾಣಂತಿ ಸೇರಿದಂತೆ ಮಗುವಿನ ಉತ್ತಮ ಬೆಳವಣಿಗೆಗೆ ಹಸಿರು ತರಕಾರಿ ಮತ್ತು ಪೌಷ್ಟಿಕಾಂಶವುಳ್ಳ ನುಗ್ಗೆ, ಕರಿಬೇವು ಹಾಗೂ ಹಣ್ಣಿನ ಮರಗಳನ್ನು ತಮ್ಮ ಮನೆಯ ಆವರಣದಲ್ಲಿ ಬೆಳೆಸುವುದು.

ಇದರಿಂದ ನಿತ್ಯ ತಾಜಾ ಸೊಪ್ಪು ಮತ್ತು ತರಕಾರಿ ಸಿಗಲಿದೆ. ತಾಜಾ ಹಣ್ಣು, ತರಕಾರಿ ಮತ್ತು ಸೊಪ್ಪು ಸೇವನೆಯಿಂದ ಹೆಚ್ಚು ವಿಟಮಿನ್ ಅಂಶ ದೊರೆಯಲಿದೆ. ಇದರಿಂದ ಅಪೌಷ್ಟಿಕತೆ ಹೋಗಲಾಡಿಸಲು ಸಹಕಾರಿಯಾಗಲಿದೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸುವುದು ಈ ಪೋಷಣ್ ರಥದ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಪ್ರಧಾನ ದಿವಾಣಿ ನ್ಯಾಯಾಧೀಶ ಮುಹಮ್ಮದ್ ಯೂನುಸ್ ಅಥಣಿ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಸಚಿನ್ ಎಚ್.ಆರ್., ಸಿಡಿಪಿಒ ಅಧಿಕಾರಿ ಬಿ.ಎಂ. ಮಾಳೆಕೊಪ್ಪ, ಇಲಾಖೆಯ ಮೇಲ್ವಿಚಾರಕಿಯರು, ಪೋಷಣ್ ಅಭಿಯಾನದ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಮಾವಿನ ತೋರಣ, ಬಾಳೆ ಗಿಡ, ಬಲೂನಿನಿಂದ ಅಲಂಕೃತಗೊಂಡಿದ್ದ ಪೋಷಣ್ ರಥ ವಾಹನವು ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ತಲೆಮೇಲೆ ಕಳಶ ಹೊತ್ತ ಮಹಿಳೆಯರು ಪೋಷಣ್ ರಥದ ಮೆರವಣಿಗೆಗೆ ಮೆರುಗು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು