ಇತ್ತೀಚಿನ ಸುದ್ದಿ
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಚ್ಚಿನಿಂದ ಕೊಚ್ಚಿ ಯುವತಿಯ ಹತ್ಯೆ ಯತ್ನ
December 21, 2020, 1:33 PM

ಹುಬ್ಬಳ್ಳಿ(reporterkarnataka news): ಹುಬ್ಬಳ್ಳಿಯಲ್ಲಿ ಯುವತಿಯೊಬ್ಬಳ ಮೇಲೆ ಮಚ್ಚಿನಿಂದ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಈ ಕೃತ್ಯ ನಡೆದಿದೆ. ಆರೋಪಿಯನ್ನು ರಿಕ್ಷಾ ಚಾಲಕ ಇಮ್ತಿಯಾಜ್ ಎಂದು ಗುರುತಿಸಲಾಗಿದೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಮೇಲೆ ಮಚ್ಚಿನಿಂದ ಆರೋಪಿ ಹಲ್ಲೆ ನಡೆಸಿದ್ದಾನೆ. ಯುವತಿಗೆ ಗಂಭೀರವಾಗಿ ಗಾಯಗಳಾಗಿವೆ.
ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.