2:08 AM Saturday6 - December 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ…

ಇತ್ತೀಚಿನ ಸುದ್ದಿ

ರಥಬೀದಿ ವೆಂಕಟರಮಣ ದೇವಸ್ಥಾನ ರಸ್ತೆ ಹಾಗೂ ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆ ಬೀದಿ ದೀಪ ಉದ್ಘಾಟನೆ

15/03/2022, 22:11

ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿಯಡಿ ರಥಬೀದಿ ವೆಂಕಟರಮಣ ದೇವಸ್ಥಾನದ ರಸ್ತೆ ಹಾಗೂ ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆಗೆ ಬೀದಿ ದೀಪಗಳ ಅಳವಡಿಕೆ ಕಾಮಗಾರಿ ಪೂರ್ಣಗೊಂಡು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. 

ಈ ವೇಳೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಸ್ಥಾನಗಳ ರಸ್ತೆಯ ಅಭಿವೃದ್ಧಿ ಹಾಗೂ ಆಧುನಿಕ ವಿದ್ಯುತ್ ದೀಪಗಳ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದ ರಸ್ತೆ ಹಾಗೂ ಬೀದಿ ದೀಪಗಳನ್ನು ಉದ್ಘಾಟಿಸಲಾಗಿದೆ. ಹಾಗೆಯೇ ಮಹಮ್ಮಾಯಿ ದೇವಸ್ಥಾನ ರಸ್ತೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಬೀದಿ ದೀಪಗಳನ್ನು ಅಳವಡಿಸಲಾಗಿದೆ ಎಂದರು. 

ರಥಬೀದಿ ವೆಂಕಟರಮಣ ದೇವಸ್ಥಾನದಿಂದ ಶರವು ದೇವಸ್ಥಾನ ರಸ್ತೊ ಸಂಪರ್ಕಿಸುವ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ರಥಬೀದಿಯಲ್ಲಿ ಟೆಂಪಲ್‌ ಸ್ಕ್ವಾರ್ ಪರಿಕಲ್ಪನೆಯೊಂದಿಗೆ ಕ್ಷೇತ್ರದ ‌ಪರಿಸರವನ್ನು ಸ್ಮಾರ್ಟ್ ಆಗಿ ಪರಿವರ್ತಿಸಲಾಗಿದೆ ಎಂದರು. 

ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಪೂರ್ಣಿಮಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಕಾರ್ಪೊರೇಟರ್ ಶೈಲೇಶ್ ಶೆಟ್ಟಿ , ಉತ್ತರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಮೇಶ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ರಾವ್,  ಮಹಾಮಾಯಿ ದೇವಸ್ಥಾನದ ಪ್ರಮುಖರಾದ ಸುರೇಶ್ ಕಾಮತ್ ಮತ್ತು ಗೋವಿಂದ ಪೈ  ಮತ್ತು 41ಸೆಂಟ್ರಲ್ ವಾರ್ಡಿನ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮುರುಳಿಧರ್ ನಾಯಕ್ ಹಾಗೂ ವಾರ್ಡಿನ  ಬೂತ್ ಅಧ್ಯಕ್ಷರಾದ ದೇವದಾಸ್  ನಾಗರ್ ಮಠ್ ,ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಪುಷ್ಪರಾಜ್ ಶೆಟ್ಟಿ, ರಾಜೇಂದ್ರ, ಉಮಾನಾಥ್ ಶೆಟ್ಟಿಗಾರ್, ಸೌಮ್ಯ ರೈ ,ಪಿ ಸಿ ಗುರು ,ನಮೃತಾ ನಾಗರ ಮಠ್, ಸತೀಶ್ ಮಲ್ಯ ಹಾಗೂ ಕಾರ್ಯಕರ್ತರಾದ ಗಿರೀಶ್, ಗಣೇಶ್ ನಾಯಕ್ ,ಕೇದರ್ ನಾಗರ್ ಮಟ್ ,ಸ್ಮಿತಾ ಕಾಮತಅಮಿತ್ ,ಸುರೇಂದ್ರ ಕುಡ್ವ ವಸಂತ್ ಪೂಜಾರಿ ,ಸಾಮಾಜಿಕ ಜಾಲತಾಣಪ್ರಮುಖರಾದ ನೀಲೇಶ್  ಕಾಮತ್, ಅಶ್ವಿತ್ ಕೊಟ್ಟಾರಿ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು