12:01 AM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ಅರಗಿಸಿಕೊಳ್ಳಲಾಗದ ಸುದ್ದಿ – ಅಕ್ಷರಲೋಕದಿಂದ ಮರೆಯಾದ ಅಕ್ಷರ ರಾಕ್ಷಸ ..!

November 13, 2020, 7:01 AM

ಬೆಂಗಳೂರು Reporter Karnataka Newsq
ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ರಾತ್ರಿ 12 ಗಂಟೆ ಹಾಯ್ ಬೆಂಗಳೂರು ಆಫೀಸ್ ನಲ್ಲಿ ಹೃದಯಾಘಾತವಾಗಿದೆ. ನಂತರ ಅಪೋಲೋ ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿದೆ.
ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನನಿಸಿದ ಬೆಳಗೆರೆ ಪತ್ರಿಕಾರಂಗದ ಹಲವು ವಿಭಾಗದಲ್ಲಿ ಕೆಲಸ ಮಾಡಿದವರು.
ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ರವಿ ಬೆಳಗೆರೆ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶುಕ್ರವಾರ ಬೆಳ್ಳಗ್ಗೆ 9 ,ಗಂಟೆಯಿಂದ ರವಿ ಬೆಳಗೆರೆ ಅಂತಿಮ‌ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸರ್ಪ ಸಂಬಂಧ, ಭೀಮಾತೀರದ ಹಂತಕರು, ನೀ ಹಿಂಗ ನೋಡಬೇಡ ನನ್ನ,ಡಿ ಕಂಪನಿ, ರಾಜ್ ಲೀಲಾ ವಿನೋದ ಸೇರಿದಂತೆ ಹಲವು ಕೃತಿಗಳು ಬೆಳಗೆರೆ ಕೊಡುಗೆ.

ಶಿಕ್ಷಣವನ್ನ ಬಳ್ಳಾರಿಯಲ್ಲಿ ಮುಗಿಸಿದ್ದ ರವಿಬೆಳಗೆರೆ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಆರಂಭ ಮಾಡುತ್ತಾರೆ.
1995 ರಲ್ಲಿ ಹಾಯ್ ಬೆಂಗಳೂರು ವಾರ ಪತ್ರಿಕೆ ಪ್ರಾರಂಭ ಮಾಡುತ್ತಾರೆ. ಕ್ರೈಂ ಡೈರಿ ಕಾರ್ಯಕಮದ ನಿರೂಪಕರಾಗಿದ್ದ ರವಿ ಬೆಳಗೆರೆ ದೊಡ್ಡ ಹೆಸರು ಸಂಪಾದಿಸಿದ್ದರು.

ಯುವ ಮನಸುಗಳಿಗಾಗಿ ಅವರು ಆರಂಭಿಸಿದ್ದ ಓ ಮನಸೆ ಪಾಕ್ಷಿಕ ಸಹ ಜನಮನ್ನಣೆಗೆ ಪಾತ್ರವಾಗಿತ್ತು.

ಕರ್ಮವೀರ, ಕಸ್ತೂರಿ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ರವಿಬೆಳಗೆರೆ ಭಾವನ ಆಡಿಯೋ , ಭಾವನ ಪ್ರಕಾಶನ , ಪ್ರಾರ್ಥನ ಶಾಲೆಯ ಸಂಸ್ಥಾಪಕರು .

ಕಿರುತೆರೆಯಲ್ಲಿಯೂ ಬೆಳಗೆರೆ ಕಾಣಿಸಿಕೊಂಡಿದ್ದು ಅವರ ನಿರೂಪಣೆ ಮೆಚ್ಚುಗೆಗೆ ಪಾತ್ರವಾಗಿತ್ತು. ಬಿಗ್ ಬಾಸ್ ನ ಕೊನೆಯ ಸೀಸನ್ ನಲ್ಲಿಯೂ ಬೆಳಗೆರೆ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು