6:50 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಎಸ್. ಅಂಗಾರಗೆ ಕನ್ನಡ ಮತ್ತು ಸಂಸ್ಕೃತಿ ಖಾತೆ,  ಲಿಂಬಾವಳಿಗೆ ನಗರಾಭಿವೃದ್ಧಿ, ಕತ್ತಿಗೆ ಟೂರಿಸಂ

January 14, 2021, 11:08 AM

ಬೆಂಗಳೂರು(reporterkarnatakanews):  ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್. ಅಂಗಾರ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಖಾತೆ ನೀಡಲಾಗಿದೆ.

6 ಬಾರಿ ಬಿಜೆಪಿ ಶಾಸಕರಾಗಿ ಕಡೆಗಣಿಸಲ್ಪಟ್ಟಿದ್ದ ಅಂಗಾರ ಅವರಿಗೆ ಕೊನೆಗೂ ಸಚಿವ ಪದವಿ ನೀಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿತ್ತು.


ಹುಕ್ಕೇರಿ ಶಾಸಕ ಉಮೇಶ್ ಕತ್ತಿಗೆ ಪ್ರವಾಸೋದ್ಯಮ ಇಲಾಖೆ ಮತ್ತು ಸಾರ್ವಜನಿಕ ಹಾಗೂ ಸಂಪರ್ಕ ಇಲಾಖೆ, ಮಹದೇವಪುರ ಶಾಸಕ ಅರವಿಂದ್ ಲಿಂಬಾವಳಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲಾಗಿದೆ. ಮುರುಗೇಶ್ ನಿರಾಣಿಯವರಿಗೆ ಇಂಧನ, ಎಂಟಿಬಿ ನಾಗರಾಜ್ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಖಾತೆ, ಆರ್. ಶಂಕರ್ ಅವರಿಗೆ ಅಬಕಾರಿ ಖಾತೆ ಹಾಗೂವಸಿ.ಪಿ. ಯೋಗೇಶ್ವರ್ ಅವರಿಗೆ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು