ಇತ್ತೀಚಿನ ಸುದ್ದಿ
ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಾತುಕತೆ ಆರಂಭ
November 18, 2020, 6:13 PM

ಬೆಂಗಳೂರು(reporterkarnataka news): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಬುಧವಾರ ದಿಲ್ಲಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ನಡುವೆ ಸಭೆ ಆರಂಭಗೊಂಡಿದೆ. ಸಂಪುಟ ಪುನಾರಚನೆಯ ಸಾಧ್ಯತೆಯೇ ಹೆಚ್ಚು ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳಸಿದ್ದರು.
ಮೂವರು ವಲಸಿಗ ಶಾಸಕರು ಮತ್ತು ಇಬ್ಬರು ಮೂಲ ಬಿಜೆಪಿ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ