9:30 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಸಚಿವ ಸ್ಥಾನಕ್ಕೆ ಲಾಬಿ ಬೇಡ:  ರಾಜ್ಯ ಬಿಜೆಪಿಗೆ ಕೇಂದ್ರ ವರಿಷ್ಠರ ಖಡಕ್ ಸೂಚನೆ ?

August 23, 2020, 7:51 AM

ಅಶೋಕ್ ಕಲ್ಲಡ್ಕ ಮಂಗಳೂರು

info.reporterkarnataka@gmail.com

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಕುರಿತು ಚರ್ಚೆ ನಡೆಸಿದ್ದಾರೆ. ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿ ಇದಾಗಿದೆ. ಪಕ್ಷದ ಕೇಂದ್ರ ವರಿಷ್ಠರ ಸಂದೇಶವನ್ನು ತಲುಪಿಸುವುದು ಭೇಟಿಯ ಮುಖ್ಯ ಉದ್ದೇಶವಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗುವ ಮುನ್ನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ

ಸಚಿವ ಡಾ. ಸುಧಾಕರ ಅವರನ್ನು ಪಕ್ಷದ ಕಚೇರಿಗೆ ಕರೆಸಿ ರಾಜ್ಯದ ಉಸ್ತುವಾರಿಯೂ ಆಗಿರುವ ಸಂತೋಷ್  ಅವರು ಚರ್ಚೆ ನಡೆಸಿದ್ದರು. ಇದೀಗ ಗಣೇಶ ಹಬ್ಬದ ಶುಭಾಶಯ ಹೇಳಲು ಹಾಗೂ ಇತ್ತೀಚೆಗೆ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ಸೇರಿದ್ದ ಯಡಿಯೂರಪ್ಪ ಅವರ ಆರೋಗ್ಯ ವಿಚಾರಿಸಲು ಈ ಭೇಟಿ ನಡೆದಿದೆ ಎಂದು ಹೇಳಲಾಗುತ್ತಿದ್ದರೂ ಇದರ ಹಿಂದಿನ ಉದ್ದೇಶ ಬೇರೆಯೇ ಆಗಿತ್ತು ಎನ್ನುವುದು ಸ್ಪಷ್ಟ. ಬಿಜೆಪಿ ಕೇಂದ್ರ ವರಿಷ್ಢರ ಸಂದೇಶವನ್ನು ಮುಖ್ಯಮಂತ್ರಿಗಳ ಮೂಲಕ ರಾಜ್ಯ ಬಿಜೆಪಿಗೆ ಹಂಚುವುದೇ ಭೇಟಿಯ ಮುಖ್ಯ ಉದ್ದೇಶವಾಗಿತ್ತು.

ಆರೆಸ್ಸೆಸ್ ನಿಂದ ಪಕ್ಷ ಕಾರ್ಯಕ್ಕೆ ನಿಯುಕ್ತಿಗೊಂಡಿರುವ ಸಂತೋಷ್ ಅವರು ಈ ಹಿಂದೆ ಸಭೆ- ಸಮಾರಂಭಗಳಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರೂ ವೈಯಕ್ತಿಕವಾಗಿ ಮುಖತಃ ಭೇಟಿಯಾದದ್ದು ಇದು ಮೊದಲ ಬಾರಿ ಎಂದು ಪಕ್ಷದ ಕೆಲವು ಹಿರಿಯ ನಾಯಕರು ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಷಯದಲ್ಲಿ ಯಾವುದೇ ಬಂಡಾಯದ ಧ್ವನಿ ಕೇಳಬಾರದು ಎಂದು ಪಕ್ಷದ ವರಿಷ್ಠರು ರಾಜ್ಯ ಬಿಜೆಪಿ ನಾಯಕರಿಗೆ ತಾಕೀತು ಮಾಡಿದ್ದಾರೆ. ಇದನ್ನು ಸಂತೋಷ್ ಅವರ ಮೂಲಕ ಯಡಿಯೂರಪ್ಪ ಅವರಿಗೆ ಹೇಳಿಸುವುದು ಬಿಜೆಪಿ ತಂತ್ರವಾಗಿತ್ತು.

ಯಡಿಯೂರಪ್ಪ ಸಂಪುಟದಲ್ಲಿ  ಕಳಪೆ ಸಾಧನೆ ಮಾಡಿದ ಸಚಿವರನ್ನು ಕೈಬಿಡುವುದು ಹಾಗೂ ಸಂಪುಟಕ್ಕೆ ಹೊಸಬರ ಸೇರ್ಪಡೆ ಕುರಿತು ಉಭಯ ನಾಯಕರ ನಡುವೆ ಚರ್ಚೆ ನಡೆದಿದೆ ಎನ್ನಲಾಗಿದೆ. ಮಂತ್ರಿಗಿರಿಗೆ ಯಾರೂ ಲಾಬಿ ಮಾಡಬಾರದು 

ಹಾಗೆಯೇ ಸಚಿವ ಸ್ಥಾನ ಉಳಿಸಿಕೊಳ್ಳಲು ಕೂಡ ಯಾವುದೇ ಸಚಿವರು ದೆಹಲಿಗೆ ಬರಬಾರದು ಎಂದು ಪಕ್ಷದ ಕೇಂದ್ರ ವರಿಷ್ಠರು ನೀಡಿದ ಸೂಚನೆಯನ್ನು ಸಂತೋಷ್ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಅವರನ್ನು ಭೇಟಿಯಾಗುವ ಮುನ್ನ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಅವರನ್ನು ಕರೆಸಿಕೊಂಡ ಸಂತೋಷ್ ಅವರು ಬೆಂಗಳೂರು ಗಲಭೆ ಹಾಗೂ ವೈದ್ಯಾಧಿಕಾರಿ ಆತ್ಮಹತ್ಯೆ ಕುರಿತು ವಿವರಣೆ ಕೇಳಿದ್ದಾರೆ. ಗಲಭೆ ಪೂರ್ವನಿಯೋಜಿತ ಎಂದಾಗಿದ್ದರೆ ಗುಪ್ತಚರ ಇಲಾಖೆಗೆ ಯಾಕೆ ಗೊತ್ತಾಗಿಲ್ಲ ಎಂದು ಕೇಂದ್ರ ಬಿಜೆಪಿ ವರಿಷ್ಢರು ಸಂತೋಷ್ ಅವರ ಮೂಲಕ ಗೃಹ ಸಚಿವರನ್ನು ಪ್ರಶ್ನಿಸಿದ್ದಾರೆ. ಹಾಗೆ ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸರಕಾರಕ್ಕೆ ಉಂಟಾಗಿರುವ ಮುಜಗರ ಕುರಿತು ಸಚಿವ ಡಾ. ಸುಧಾಕರ್ ಜತೆ ಚರ್ಚಿಸಿದ್ದಾರೆ. ಇಬ್ಬರೂ ಸಚಿವರನ್ನು ರಾಜ್ಯ ಬಿಜೆಪಿಯ ಉಸ್ತುವಾರಿಯಾದ ಸಂತೋಷ್ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಉನ್ನತ ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು