ಇತ್ತೀಚಿನ ಸುದ್ದಿ
ಗಲಭೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವ ಸದಾನಂದ ಗೌಡ, ಸಂಸದೆ ಶೋಭಾ ಭೇಟಿ
August 13, 2020, 2:53 AM

ಬೆಂಗಳೂರು(reporterkarnataka news): ನಗರದ ಗಲಭೆ ಪೀಡಿತ ಪ್ರದೇಶಗಳಾದ ಕೆ ಜಿ. ಹಳ್ಳಿ ಮತ್ತು ಡಿ ಜಿ ಹಳ್ಳಿ ಪ್ರದೇಶಗಳಿಗೆ ಕೇಂದ್ರ ಸಚಿವ ಸದಾನಂದ ಗೌಡ ಮತ್ತು ಬಿಜೆಪಿ ಸಂಸತ್ ಸದಸ್ಯರಾದ ಶೋಭಾ ಕರಂದ್ಲಾಜೆ ಭೇಟಿ ನೀಡಿ ಸಂತ್ರಸ್ತರನ್ನು ಸಂತೈಸಿದರು.

ಪರಿಸ್ಥಿತಿಯ ಅವಲೋಕನ ನಡೆಸಿದ ಸದಾನಂದ ಗೌಡ, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಯನ್ನು ಅವರು ಖಂಡಿಸಿದರು.
ಇದೇ ವೇಳೆ ಗಲಭೆ ಪೀಡಿತ ಕೆ ಜಿ ಹಳ್ಳಿಗೆ ಭೇಟಿ ನೀಡಿದ ಸಂಸತ್ ಸದಸ್ಯೆ ಶೋಭಾ ಕರಂದ್ಲಾಜೆ, ಗಾಯಾಳುಗಳನ್ನು ಭೇಟಿ ಮಾಡಿ ಸಂತೈಸಿದರು. ಮುಗ್ಧರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ವಾಹನಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಟೀಕಿಸಿದರು.