2:50 AM Monday8 - December 2025
ಬ್ರೇಕಿಂಗ್ ನ್ಯೂಸ್
ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಸಾಹಿತಿ ಡಾ. ಸಿ. ಸೋಮಶೇಖರ್ ಅವರ ‘ನೀನೊಲಿದ ಬದುಕು’ ಆತ್ಮಕಥೆ ಲೋಕಾರ್ಪಣೆ

22/02/2023, 00:03

ಮಂಗಳೂರು(reporterkarnataka.com): ಜೀವನಾನುಭವದ ಜೊತೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೆ ರ್ಯ ಅಗತ್ಯ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಹೇಳಿದರು.


ಕಲ್ಕೂರ ಪ್ರತಿಷ್ಠಾನ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ.ಕ. ಜಿಲ್ಲಾ ಸಮಿತಿ, ಸ್ನಾತಕೋತ್ತರ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಆಶ್ರಯದಲ್ಲಿ ನಗರದ ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಮತ್ತು ಸಾಹಿತಿ ಡಾ. ಸಿ. ಸೋಮಶೇಖರ ಅವರ ‘ನೀನೊಲಿದ ಬದುಕು’ ಆತ್ಮಕಥನ ಲೋಕಾರ್ಪಣಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.


ಸೋಮಶೇಖರ್ ಅವರು ಕೃತಿಯನ್ನು ಈಗಾಗಲೇ ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದಾರೆ. ಇದೀಗ ದ.ಕ. ಜಿಲ್ಲೆಯ ಬಗ್ಗೆ ಅವರಿಗಿರುವ ಅಭಿಮಾನದಿಂದ ಇಲ್ಲಿ ಮತ್ತೊಮ್ಮೆ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸೋಮಶೇಖರ್ ಅವರು ಅಧಿಕಾರಿಯಾಗಿ ದಕ್ಷತೆಯಿಂದ ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿದ್ದಾರೆ. ಪ್ರಾಧಿಕಾರದ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಜನಪರ ಕರ್ತವ್ಯ ನಿರ್ವಹಿಸಿದ್ದಾರೆ. ಕಾಸರಗೋಡು ಕನ್ನಡಿಗರಿಗೆ ಆಗುವ ಅನ್ಯಾಯಗಳ ವಿರುದ್ದ ಸ್ಪಂದಿಸಿ ಪರಿಹಾರ ಕಂಡುಕೊಂಡಿದ್ದಾರೆ ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ದ.ಕ.ಜಿಲ್ಲಾ
ಜಾನಪದ ಅಕಾಡೆಮಿ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲಬೈಲ್, ವಿ.ವಿ. ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ. ಲಕ್ಷ್ಮಿದೇವಿ ಎಲ್., ಎ.ಆರ್. ಸುಬ್ಬಯ್ಯಕಟ್ಟೆ ಸೇರಿದಂತೆ ಮತ್ತಿತರರು ಇದ್ದರು.

ಹಿರಿಯ ಸಾಹಿತಿ ಮತ್ತು ವಿಶ್ರಾಂತ ಕುಲಪತಿ ಪ್ರೊ| ಬಿ.ಎ. ವಿವೇಕ ರೈ ಅವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಸ್ತಾವನೆಗೈದರು. ದ.ಕ.ಜಿ.ಪಂ. ಸಿಇಒ ಡಾ| ಕುಮಾರ್ ಕೃತಿ ಪರಿಚಯಿಸಿದರು.


ಮಂಗಳೂರು ವಿ.ವಿ. ಸ್ನಾತಕೋತ್ತರ ತುಳು ವಿಭಾಗ ಸಂಯೋಜಕ ಡಾ| ಮಾಧವ ಎಂ.ಕೆ. ಸ್ವಾಗತಿಸಿ, ಉಪನ್ಯಾಸಕಿ ಜಯಲಕ್ಷ್ಮಿ ಶೆಟ್ಟಿ ವಂದಿಸಿದರು. ಡಾ| ಪ್ರಿಯಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು